Congress Mla Anand Singh Seen With Rss Leaders In Mangaluru
Congress MLA Anand Singh Seen With RSS Leaders In Mangaluru
ಆಪರೇಷನ್ ಕಮಲದ ಸುದ್ದಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಬಳ್ಳಾರಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಆರ್ ಎಸ್‍ಎಸ್ ಮುಖಂಡರೊಂದಿಗೆ ಕಾಣಿಸಿಕೊಂಡಿದ್ದು, ಮತ್ತೆ ಮಾತೃಪಕ್ಷ ಬಿಜೆಪಿಗೆ ಸೇರುತ್ತಾರ ಎಂಬ ಚರ್ಚೆ ರಾಜಕೀಯ ವಲಯದಿಂದ ಕೇಳಿ ಬಂದಿದೆ.
ಆರ್ ಎಸ್‍ಎಸ್ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್ ಮುಂದಾಳತ್ವದಲ್ಲಿ ನಡೆಯುತ್ತಿರುವ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಭಾನುವಾರ ನಡೆದ ಕ್ರೀಡೋತ್ಸವದಲ್ಲಿ ಆನಂದ್ ಸಿಂಗ್ ಭಾಗಿಯಾಗಿದ್ದರು.
ಇಡೀ ಕಾರ್ಯಕ್ರಮದಲ್ಲಿ ಬಿಜೆಪಿ, ಆರ್ ಎಸ್‍ಎಸ್ ಮುಖಂಡರುಗಳನ್ನು ಹೊರತುಪಡಿಸಿ ಬೇರೆ ಯಾರೂ ಅತಿಥಿಗಳು ಇರಲಿಲ್ಲ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿಯೂ ಆನಂದ್ ಸಿಂಗ್ ಹೆಸರು ಇರಲಿಲ್ಲ. ಹೀಗಿದ್ದರೂ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಕುತೂಹಲ ಕೆರಳಿಸಿದೆ.
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಬಿಜೆಪಿ ಆಪರೇಷನ್ ನಡೆಸುತ್ತೆ ಎಂಬ ಆರೋಪ ಬಿಜೆಪಿ ಮುಖಂಡರ ಮೇಲೆ ಕೇಳಿ ಬಂದಿತ್ತು. ಆನಂದ್ ಸಿಂಗ್ ಅವರ ನಡೆ ಸದ್ಯ ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದ್ದು, ಆನಂದ್ ಸಿಂಗ್ ಮತ್ತೆ ಬಿಜೆಪಿ ಸೇರುತ್ತಾರಾ ಎನ್ನುವ ಪ್ರಶ್ನೆ ಮತ್ತೆ ಹುಟ್ಟಿಕೊಂಡಿತ್ತು.